HEADLINES

ನಾಳೆ (ಆಗಸ್ಟ್ 21) ಭಾರತ್ ಬಂದ್..?


ಎಸ್‌ಸಿ/ಎಸ್‌ಟಿ ಮೀಸಲಾತಿ ಸಂಬಂಧಿಸಿ ಸುಪ್ರೀಂ ಕೋರ್ಟ್ ನ ತೀರ್ಪಿನ ವಿರುದ್ಧ ಪ್ರತಿಭಟನೆಯ ಸಂಕೇತವಾಗಿ ರಿಸರ್ವೇಶನ್ ಬಚಾವೋ ಸಂಘರ್ಷ್ ಸಮಿತಿಯು ಆಗಸ್ಟ್ 21 ರಂದು ಅಂದರೆ ನಾಳೆ ಭಾರತ್ ಬಂದ್​​​ಗೆ ಕರೆ ನೀಡಿದೆ. 

ಬಂದ್ ಗೆ ಈಗಾಗಲೆ ರಾಜಸ್ಥಾನದ ಎಸ್‌ಸಿ/ಎಸ್‌ಟಿ ಗುಂಪುಗಳು ಬೆಂಬಲ ವ್ಯಕ್ತಪಡಿಸಿವೆ. ಆದರೆ ಕರ್ನಾಟಕದಲ್ಲಿ ಈ ಬಂದ್ ಪರಿಣಾಮ ಬೀರಲಿದೆಯಾ  ಎಂಬುದರ ಬಗ್ಗೆ ಈವರೆಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ.

ಸುಪ್ರೀಂಕೋರ್ಟ್‌ನ ತೀರ್ಪು ಎಸ್‌ಸಿ ಮತ್ತು ಎಸ್‌ಟಿ ಗುಂಪುಗಳೊಳಗೆ ಉಪ-ವರ್ಗಗಳನ್ನು ರಚಿಸಲು ರಾಜ್ಯಗಳಿಗೆ ಅವಕಾಶ ಮಾಡಿಕೊಟ್ಟಿದ್ದು, ನಿಜವಾಗಿಯೂ ಅಗತ್ಯವಿರುವವರಿಗೆ ಮೀಸಲಾತಿಯಲ್ಲಿ ಆದ್ಯತೆ ನೀಡಬೇಕು ಎಂದು ಹೇಳಿದೆ. 

ಈ ನಿರ್ಧಾರವು ವ್ಯಾಪಕ ಚರ್ಚೆಗೆ ಕಾರಣವಾಗಿದ್ದು, ಮೀಸಲಾತಿ ಕುರಿತ ಸುಪ್ರೀಂಕೋರ್ಟ್ ತೀರ್ಪನ್ನು ಪ್ರಶ್ನಿಸುವುದು ಮತ್ತು ಅದನ್ನು ಹಿಂಪಡೆಯುವಂತೆ ಒತ್ತಾಯಿಸುವುದು ಭಾರತ್ ಬಂದ್‌ ನ ಮುಖ್ಯ ಉದ್ದೇಶವಾಗಿದೆ ಎಂದು ವರದಿಗಳ ಮೂಲಕ‌ ತಿಳಿದುಬಂದಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು