HEADLINES

ಮಣಿಕರ ಶಾಲೆಯಲ್ಲಿ 78ನೇ ಸ್ವಾತಂತ್ರ್ಯೋತ್ಸವ ಆಚರಣೆ


 ಹಿರಿಯ ಪ್ರಾಥಮಿಕ ಶಾಲೆ ಮಣಿಕ್ಕರ ಇಲ್ಲಿ 78 ನೇ ಸ್ವಾತಂತ್ರ್ಯೋತ್ಸವ  ಕಾರ್ಯಕ್ರಮವನ್ನು ಬಹಳ ಅದ್ದೂರಿಯಾಗಿ ಆಚರಿಸಲಾಯಿತು‌. 

ಶಾಲಾಭಿವೃದ್ದಿ ಸಮಿತಿಯ ಅಧ್ಯಕ್ಷರಾದ ಅಬ್ದುಲ್ ರಹಿಂ ರವರು ಧ್ವಜರೋಹನ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಮಹಾತ್ಮಗಾಂಧಿ, ಹಾಗೂ ಸಂವಿಧಾನ ಶಿಲ್ಪಿ ಬಿ. ಆರ್. ಅಂಬೇಡ್ಕರ್ ರವರ ಭಾವ ಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಾಯಿತು. 


ತದನಂತರ ಶಾಲಾ ಮಕ್ಕಳಿಂದ ಲೇಜಿಮ್, ಕವಾಯತು ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಮನರಂಜಿಸಿದವು. ಧ್ವಜ ರೋಹಣದ ನಂತರ ಶಾಲಾ ಮಕ್ಕಳು ಮರೆವಣಿಗೆ ಮೂಲಕ ತಾರಿಪಡ್ಪು ಹಾಗೂ ಮುರ್ಕಿತ್ತಿ ರಸ್ತೆಯಲ್ಲಿ ಜಯಘೋಷಗಳನ್ನು ಮೊಳಗಿಸಿ 78 ನೇ ಸ್ವಾಂತ್ರತ್ಯೋತ್ಸವ ಕಾರ್ಯಕ್ರಮವನ್ನು ಅತ್ಯಂತ ಸಡಗರದಿಂದ ಆಚರಿಸಿದರು. ಮೆರವಣಿಯಲ್ಲಿ ವಿದ್ಯಾಭಿಮಾನಿಗಳೆಲ್ಲರೂ ಹೆಜ್ಜೆ ಹಾಕಿದ್ದು ಕಾರ್ಯಕ್ರಮಕ್ಕೆ ಮತ್ತಷ್ಟು ಮೆರುಗು ತಂದಿತ್ತು. 


ಕೊಳ್ತಿಗೆ ಗ್ರಾಮ ಪಂಚಾಯತ್ ಅಧ್ಯಕ್ಷರು, ಸದಸ್ಯರು, ಶಾಲಾ ಎಸ್ ಡಿ ಎಂ ಸಿ ಸದಸ್ಯರು, ಪೋಷಕರು ಹಾಗೂ ಊರಿನ ದಾನಿಗಳು, ವಿದ್ಯಾಭಿಮಾನಿಗಳು ಉಪಸ್ಥಿರಿದ್ದರು.

ಶಾಲೆಯ ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದ ಹಾಗೂ ಅಕ್ಷರ ದಾಸೋಹ ಸಿಬ್ಬಂದಿಗಳು ಸಹಕರಿಸಿದರು.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು