HEADLINES

ಹಾಡಹಗಲೇ ನಿವೃತ್ತ ಶಿಕ್ಷಕನ ತಲೆಗೆ ಕಲ್ಲು ಹಾಕಿ ಭೀಕರ ಕೊಲೆ

 

ಬೆಳಾಲಿನಲ್ಲಿ ಹಾಡಹಗಲೇ ಮನೆಯ ಅಂಗಳದಲ್ಲಿಯೇ ಶಾಲಾ ನಿವೃತ್ತ ಶಿಕ್ಷಕ ಬಾಲಕೃಷ್ಣ ಭಟ್(83) ರವರನ್ನು ಕೊಲೆ ಮಾಡಲಾಗಿದೆ. ಹತ್ತಿರದ ರಕ್ತ ಸಂಬಂಧಿಯಿಂದಲೇ ಹತ್ಯೆ ನಡೆದಿರುವ ಶಂಕೆ ಕೂಡ ವ್ಯಕ್ತವಾಗಿದೆ.

ಆ.20ರಂದು ಸಂಜೆ ದ. ಕ ಜಿಲ್ಲೆಯ ಬೆಳ್ತಂಗಡಿ ತಾಲ್ಲೂಕಿನ ಬೆಳಾಲಿನ ಪ್ರಾಥಮಿಕ ಆರೋಗ್ಯ ಕೇಂದ್ರದ ಎದುರು ಇರುವ ಬಾಲಕೃಷ್ಣ ಭಟ್ ಅವರ ಮನೆಯಲ್ಲಿಯೇ ಘಟನೆ. ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ಬಂದು ಪರಿಶೀಲನೆ ನಡೆಸಿದ್ದಾರೆ. ಘಟನೆ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ

ವೃತ್ತಿಯಲ್ಲಿ ಶಿಕ್ಷಕರಾಗಿದ್ದ ಶ್ರೀ ಬಾಲಕೃಷ್ಣ ಭಟ್ ಅವರು ಕೊಲ್ಪಾಡಿ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರಾಗಿದ್ದರು. ಅವರ ಪತ್ನಿ ಲೀಲಾ ಮೇಡಂ ಕೂಡ ಬೆಳಾಲಿನಲ್ಲಿ ಶಿಕ್ಷಕಿಯಾಗಿದ್ದು ನಿವೃತ್ತಿ ಹೊಂದಿದ್ದರು. ಕೆಲವು ವರ್ಷಗಳ ಹಿಂದೆ ಅವರು ತೀರಿಕೊಂಡಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು