ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಪೆರ್ನಾಜೆಯಲ್ಲಿರುವ ದಕ್ಷಿಣಕನ್ನಡ ಜಿಲ್ಲಾ ಹಿರಿಯ ಪ್ರಾಥಮಿಕ ಶಾಲೆಯನ್ನು ಇದೀಗ ಖಾಸಗಿ ಶಾಲೆಯ ಕಟ್ಟಡಕ್ಕೆ ಸ್ಥಳಾಂತರಗೊಳಿಸಲಾಗಿದೆ.
ಶಾಲೆಯ ಮುಂಭಾಗ ಮತ್ತು ಹಿಂಭಾಗದ ಗುಡ್ಡ ಕುಸಿತವಾಗುವ ಸಾಧ್ಯತೆ ಇದ್ದು ಮುಂಜಾಗ್ರತ ಕ್ರಮವಾಗಿ ಈಗಾಗಲೇ ಶಾಲೆಯಲ್ಲಿನ ವಿದ್ಯಾರ್ಥಿಗಳನ್ನು ಪಕ್ಕದಲ್ಲಿರುವ ಖಾಸಾಗಿ ಕಟ್ಟಡಕ್ಕೆ ಸ್ಥಳಾಂತರ ಮಾಡಲಾಗಿದೆ.
ಇಲ್ಲಿನ ಗುಡ್ಡ ಕುಸಿಯುವ ಸಾಧ್ಯತೆ ಮೊದಲೆ ತಿಳಿದಿದ್ದರು ಸಹ ಈ ಶಾಲೆಗೆ ಅನಾವಶ್ಯಕ ಹಣ ಖರ್ಚು ಮಾಡಲಾಗಿದೆ. ಶಾಲೆಗೆ ಬೇಕಾದ ವ್ಯವಸ್ಥೆಯನ್ನು ಮಾಡಿಲ್ಲವೆಂದು ಶಾಲಾ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
0 ಕಾಮೆಂಟ್‌ಗಳು