ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಭಾಗಿಯಾಗಿರುವ ಕುರಿತು ರಾಜ್ಯಪಾಲರಿಗೆ ದೂರು ದಾಖಲಾದ ಹಿನ್ನೆಲೆಯಲ್ಲಿ ಇದೀಗ ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿಯನ್ನು ರಾಜ್ಯಪಾಲರು ನೀಡಿದ್ದಾರೆ.
ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡುತ್ತಲೇ ಸಿಎಂ ಗೆ ನಡುಕ ಹೆಚ್ಚಾಗಿದ್ದು ಯಾವುದೇ ಕ್ಷಣದಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆಯೂ ಬರಬಹುದು ಎನ್ನಲಾಗುತ್ತಿದೆ.
ಈಗಾಗಲೆ ಕಾನೂನು ಸಲಹೆಗಾರ ಪೊನ್ನಣ್ಣ, ಸರ್ಕಾರದ ಪ್ರಧಾನ ಕಾರ್ಯದರ್ಶಿ, ಸಚಿವರಾದ ಬೈರತಿ ಸುರೇಶ್, ಪ್ರಿಯಾಂಕ್ ಖರ್ಗೆ ಸಿಎಂ ನಿವಾಸಕ್ಕೆ ಭೇಟಿ ನೀಡಿ ಸಿಎಂ ನಿವಾಸದಲ್ಲಿ ಚರ್ಚೆ ನಡೆಸುತ್ತಿದ್ದಾರೆ ಎಂಬ ಮಾಹಿತಿಯೂ ಕೇಳಿಬರುತ್ತಿದೆ.
0 ಕಾಮೆಂಟ್‌ಗಳು