HEADLINES

ಬಾತ್ ರೂಮ್ ನಲ್ಲಿ ಬಾಲಕ ನೇಣು ಬಿಗಿದು ಆತ್ಮಹತ್ಯೆ

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಯೊಬ್ಬ  ಮನೆಯ ಬಾತ್ ರೂಮ್ ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ ರಾತ್ರಿ (ಆಗಸ್ಟ್‌ 7) ನಡೆದಿದೆ.

ಬಂಟ್ವಾಳದ ಬೆಂಜನಪದವು ಕರಾವಳಿ ಸೈಟ್‌ ನಿವಾಸಿ ಉದಯ ಆಚಾರ್ಯ ಅವರ ಮಗ ಭವಿಷ್ಯ ಆಚಾರ್ಯ (15) ಎಂಬಾತ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ.

ಬಡಕಬೈಲಿನ ಖಾಸಗಿ ಶಾಲೆಯಲ್ಲಿ ಈತ ವಿದ್ಯಾಭ್ಯಾಸ ಮಾಡುತ್ತಿದ್ದ. ಆಗಸ್ಟ್‌ 7 ರಂದು ಬುಧವಾರ ರಾತ್ರಿ ಸುಮಾರು 7.30 ಗಂಟೆಗೆ ಸ್ನಾನ ಮಾಡಲೆಂದು ಬಾತ್ ರೂಮ್ ಗೆ ತೆರಳಿದ್ದು ಈತ ಎಷ್ಟೇ ಹೊತ್ತಾದರೂ ಬರದ ಕಾರಣ ತಾಯಿ ಬಾಗಿಲು ಬಡಿದರೂ ತೆಗೆಯದ ಹಿನ್ನೆಲೆಯಲ್ಲಿ ಬಾಗಿಲು ಮುರಿದು ಒಳಗೆ ನುಗ್ಗಿದಾಗ ಈತ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.

ತಕ್ಷಣ ಬಾಲಕನನ್ನು ತುಂಬೆ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ, ಅಷ್ಟೋತ್ತಿಗಾಗಲೆ ಬಾಲಕ ಮೃತಪಟ್ಟಿರುವುದು ವೈದರು ತಿಳಿಸಿದ್ದಾರೆ. 

ಬಂಟ್ವಾಳ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು