HEADLINES

ಮೈಸೂರು ಚಲೋ ಪಾದಯಾತ್ರೆಯಲ್ಲಿ ಅರುಣ್ ಕುಮಾ‌ರ್ ಪುತ್ತಿಲ ಸಹಿತ ಪುತ್ತೂರಿನಿಂದ ಹಲವಾರು ಭಾಗಿ

 ಪುತ್ತೂರು: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ-ಜೆಡಿಎಸ್ ದೋಸ್ತಿಗಳು ಮೈಸೂರಿಗೆ ನಡೆದ ಪಾದಯಾತ್ರೆಯಲ್ಲಿ ಪುತ್ತೂರು ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ಸಹಿತ ಹಲವಾರು ಮಂದಿ ಪ್ರಮುಖರು ಭಾಗವಹಿಸಿದ್ದರು.

ಮೈಸೂರು ಚಲೋ ಪಾದಯಾತ್ರೆಯಲ್ಲಿ ಅರುಣ್ ಕುಮಾ‌ರ್ ಪುತ್ತಿಲ ಸಹಿತ ಪುತ್ತೂರಿನಿಂದ ಹಲವಾರು ಭಾಗಿ

ಅರುಣ್ ಕುಮಾ‌ರ್ ಪುತ್ತಿಲ ಅವರು ಕೆಂಗೇರಿಯಿಂದ ಬಿಡದಿಯವರೆಗೆ 13ಕಿ.ಮೀ ಪಾದಯಾತ್ರೆಯಲ್ಲಿ ಕ್ರಮಿಸಿದರು. ಕೇಂದ್ರ ಸಂಸದೀಯ ಮಂಡಳಿ ಹಾಗೂ ಚುನಾವಣಾ ಸಮಿತಿ ಸದಸ್ಯರು ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಕೇಂದ್ರ ಸಚಿವರು ಹಾಗೂ ಜೆಡಿಎಸ್‌ ರಾಜ್ಯಾಧ್ಯಕ್ಷ ಹೆಚ್.ಡಿ ಕುಮಾರಸ್ವಾಮಿ, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ , ವಿರೋಧ ಪಕ್ಷ ನಾಯಕ ಆರ್. ಅಶೋಕ್, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯ ಉಸ್ತುವಾರಿ ಡಾ ರಾಧಾ ಮೋಹನ್ ದಾಸ್ ಅಗರ್ವಾಲ್, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸಹಿತ ಕೇಂದ್ರ ಸಚಿವರು ಹಾಗೂ ಹಲವು ನಾಯಕರು ಭಾಗವಹಿಸಿದ್ದರು.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು