HEADLINES

ಬ್ರೆಜಿಲ್‌ನಲ್ಲಿ ಭೀಕರ ವಿಮಾನ ದುರಂತ

 ಬ್ರೆಜಿಲ್‌ನಲ್ಲಿ ಭೀಕರ ವಿಮಾನ ದುರಂತ ಸಂಭವಿಸಿ 62 ಪ್ರಯಾಣಿಕರು, 8 ವಿಮಾನದ ಸಿಬ್ಬಂದಿಗಳು ಸಜೀವ ದಹನವಾಗಿದ್ದಾರೆ. ವಿಮಾನವು ಬ್ರೆಜಿಲ್‌ನ ಸಾವೋ ಪೌಲೋದಲ್ಲಿ ಪತನಗೊಂಡು ಭೂಮಿಗೆ ಅಪ್ಪಳಿಸುತ್ತಿರುವಾಗಲೆ ವಿಮಾನಕ್ಕೆ ಅಗ್ನಿ ಹೊತ್ತಿಕೊಂಡಿದೆ. ಪತನಗೊಂಡ ಕೆಲವೇ ಸೆಕೆಂಡ್‌ಗಳಲ್ಲಿ ಭೀಕರವಾಗಿ ಬೆಂಕಿ ಕಾಣಿಸಿಕೊಂಡಿದ್ದು, ಸುತ್ತಲೂ ಹೊಗೆ ಆವರಿಸಿಕೊಂಡಿದ್ದರಿಂದ  ವಿಮಾನದಲ್ಲಿದ್ದ ಎಲ್ಲ 70 ಜನರೂ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.


ಕಾಸ್ಕಾವೆಲ್‌ನಿಂದ ಗುವಾರುಲ್ಹೋಸ್‌ ಏರ್‌ಪೋರ್ಟ್‌ಗೆ ತೆರಳುತ್ತಿದ್ದ ವೇಳೆ ಸಾವೋ ಪೌಲೋ ರಾಜ್ಯದ ವಿನ್ಹೇಡೋ ಎಂಬ ಪ್ರದೇಶದಲ್ಲಿ ಘಟನೆ ಸಂಭವಿಸಿದೆ. ವಿಮಾನದ ಅವಶೇಷಗಳಿಂದ ಶವಗಳನ್ನು ಹೊರತೆಗೆಯುವ ಕಾರ್ಯಚರಣೆ ನಡೆಯುತ್ತಿದೆ. ಮೃತಪಟ್ಟವರ ಗುರುತು ಪತ್ತೆ ಹಚ್ಚಲಾಗುತ್ತಿದ್ದು. ಅಗ್ನಿಶಾಮಕ ಸಿಬ್ಬಂದಿಯು ಸ್ಥಳದಲ್ಲೇ ಬೀಡು ಬಿಟ್ಟಿದ್ದಾರೆ. ಶವಗಳನ್ನು ಸಾಗಿಸಲು ಆಂಬುಲೆನ್ಸ್‌ ವ್ಯವಸ್ಥೆ ಮಾಡಲಾಗಿದೆ ಎಂಬುದಾಗಿ ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು