ಚಿತ್ರದುರ್ಗದ ರೇಣುಕಾಸ್ವಾಮಿ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್, ಬಳ್ಳಾರಿ ಜಿಲ್ಲೆಯ ಕುರುಗೋಡು ಪಟ್ಟಣದ ಐತಿಹಾಸಿಕ ದೊಡ್ಡಬಸವೇಶ್ವರ ದೇವಸ್ಥಾನದಲ್ಲಿ ಬೃಹತ್ ನಂದಿ ವಿಗ್ರಹದ ಎದುರು ನಟ ದರ್ಶನ್ ಪೋಟೋಗಳನ್ನು ಇಟ್ಟು ಪೂಜೆ ಮಾಡಿರುವ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
ದೊಡ್ಡಬಸವೇಶ್ವರ ದೇವಸ್ಥಾನದಲ್ಲಿ ಮಲ್ಲಿ ಎಂಬ ಅರ್ಚಕ ನಟ ದರ್ಶನ್ ಪೋಟೋ ಇಟ್ಟು ಪೂಜೆ ಮಾಡಿದ್ದಾರೆ.
ಸರ್ಕಾರದ ಧಾರ್ಮಿಕ ಇಲಾಖೆಯ ಸುಪರ್ದಿಯಲ್ಲಿರುವ ದೇವಸ್ಥಾನದಲ್ಲಿ ಹೀಗೆ ಮಾಡುವುದು ಸರಿಯೇ? ಎನ್ನುವ ಪ್ರಶ್ನೆ ಎದ್ದಿದೆ. ದರ್ಶನ್ ಅವರಿಗೆ ಒಳ್ಳೆಯದಾಗಲಿ, ಸಂಕಷ್ಟಗಳು ದೂರವಾಗಲಿ ಎಂದು ಪೂಜೆ ಮಾಡಿಸಲಿ. ಅದು ಬಿಟ್ಟು ದೇವರ ಮುಂದೆ ಫೋಟೋ ಇಟ್ಟು ಪೂಜೆ ಮಾಡಿರುವುದು ಎಷ್ಟು ಸರಿ ಎಂದು ಅನೇಕರು ಅಸಮಾಧಾನ ಹೊರಹಾಕಿದ್ದಾರೆ.
0 ಕಾಮೆಂಟ್‌ಗಳು