HEADLINES

ನೇಪಾಳದಲ್ಲಿ ಭೀಕರ ಬಸ್‌ ಅಪಘಾತ



 ನೇಪಾಳದ ರಾಜಧಾನಿ ಕಠ್ಮಂಡುವಿಗೆ ತೆರಳುತ್ತಿದ್ದ ಯುಪಿ ಬಸ್ ನದಿಗೆ ಬಿದ್ದಿದ್ದು, ಈ ಘಟನೆಯಲ್ಲಿ ಹಲವರು ಸಾವನ್ನಪ್ಪಿದ್ದಾರೆ.  ನೇಪಾಳದ ತನಾಹುನ್‌ನಲ್ಲಿ ಈ ದುರ್ಘಟನೆ ನಡೆದಿದೆ. 40 ಜನರನ್ನು ಹೊತ್ತೊಯ್ಯುತ್ತಿದ್ದ ಭಾರತೀಯ ಪ್ರಯಾಣಿಕರ ಬಸ್ ತನಾಹುನ್ ಜಿಲ್ಲೆಯ ಮಾರ್ಸ್ಯಾಂಗ್ಡಿ ನದಿಗೆ ಬಿದ್ದಿದೆ ಎಂದು ನೇಪಾಳ ಪೊಲೀಸರು ಖಚಿತಪಡಿಸಿದ್ದಾರೆ. ‘ಯುಪಿ 53 ಎಫ್‌ಟಿ 7623 ನಂಬರ್ ಪ್ಲೇಟ್ ಹೊಂದಿರುವ ಬಸ್ ನದಿಗೆ ಬಿದ್ದು ನದಿ ದಡದಲ್ಲಿ ಬಿದ್ದಿದೆ’ ಎಂದು ಜಿಲ್ಲಾ ಪೊಲೀಸ್ ಕಚೇರಿ ತನಹುನ್‌ನ ಡಿಎಸ್‌ಪಿ ದೀಪ್‌ಕುಮಾರ್ ರಾಯಾ ಖಚಿತಪಡಿಸಿದ್ದಾರೆ.

ಅಧಿಕಾರಿಯ ಪ್ರಕಾರ, ಬಸ್ ಪೋಖರಾದಿಂದ ಕಠ್ಮಂಡುವಿಗೆ ಹೋಗುತ್ತಿತ್ತು. ಬಸ್ ಗೋರಖ್‌ಪುರದ ಕೇಸರವಾಣಿ ಟ್ರಾವೆಲ್ಸ್‌ನದ್ದು ಎನ್ನಲಾಗಿದೆ.ಬಸ್‌ನಲ್ಲಿ 40 ಮಂದಿ ಪ್ರಯಾಣಿಕರಿದ್ದರು ಎಂದು ಪೊಲೀಸರು ಆರಂಭದಲ್ಲಿ ಅಂದಾಜಿಸಿದ್ದಾರೆ. ಉಳಿದ ಪ್ರಯಾಣಿಕರಿಗಾಗಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಪ್ರಾಂತೀಯ ಪೊಲೀಸ್ ಕಚೇರಿಯ ವಕ್ತಾರರಾದ ಹಿರಿಯ ಪೊಲೀಸ್ ಅಧೀಕ್ಷಕ ರವೀಂದ್ರ ರೆಗ್ಮಿ ತಿಳಿಸಿದ್ದಾರೆ. ರಕ್ಷಿಸಲ್ಪಟ್ಟವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕಳುಹಿಸಲಾಗಿದೆ.

ಯುಪಿ ಸರ್ಕಾರದ ಸಾರಿಗೆ ಸಚಿವ ದಯಾಶಂಕರ್ ಸಿಂಗ್ ಕೂಡ ಈ ಘಟನೆ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಘಟನೆಯ ಬಗ್ಗೆ ದುಃಖ ವ್ಯಕ್ತಪಡಿಸಿದ ಸಿಂಗ್ “ಅಪಘಾತದಲ್ಲಿ ಮೃತಪಟ್ಟವರ ಆತ್ಮಕ್ಕೆ ಶಾಂತಿ ಸಿಗಲಿ ಮತ್ತು ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. ಸಂತ್ರಸ್ತರಿಗೆ ಎಲ್ಲ ರೀತಿಯ ನೆರವು ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ” ಎಂದು ಅವರು ಬರೆದಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು