HEADLINES

ನೀರಜ್ ಚೋಪ್ರಾಗೆ ಬೆಳ್ಳಿ ಪದಕ


ಪ್ಯಾರಿಸ್: ಪ್ಯಾರಿಸ್ ಒಲಿಂಪಿಕ್ಸ್ 2024ರ ಜಾವೆಲಿನ್ ಥ್ರೋ ಸ್ಪರ್ಧೆಯಲ್ಲಿ ನೀರಜ್ ಚೋಪ್ರಾ ಅವರು 89.45 ಮೀಟರ್ ದೂರ ಎಸೆದು ಬೆಳ್ಳಿ ಪದಕ ಗೆದ್ದುಕೊಂಡರ.

ಈ ಮೂಲಕ ಭಾರತಕ್ಕೆ ಮೊದಲ ಬೆಳ್ಳಿ ಪದಕ ತಂದುಕೊಟ್ಟರು. ಪಾಕಿಸ್ತಾನದ ಅರ್ಷದ್ ನದೀಮ್ ಉತ್ತಮ ಪ್ರದರ್ಶನ ನೀಡಿದರು.  ಈ ಮೂಲಕ ಅವರು ಈಗ ಪಾಕಿಸ್ತಾನದ ಮೊದಲ ವೈಯಕ್ತಿಕ ಒಲಿಂಪಿಕ್ ಚಿನ್ನದ ಪದಕ ವಿಜೇತರಾಗಿದ್ದರೆ.

ಮೂರು ವರ್ಷಗಳ ಹಿಂದೆ ಟೋಕಿಯೊ ಸಮ್ಮರ್ ಗೇಮ್ಸ್ ನಲ್ಲಿ ಚಿನ್ನಗೆದ್ದಿದ್ದ ನೀರಜ್, ಮಂಗಳವಾರ ನಡೆದ ಪ್ಯಾರಿಸ್ ಒಲಿಂಪಿಕ್ಸ್  ನ ಪುರುಷರ ಜಾವೆಲಿನ್ ಥ್ರೋ ಅರ್ಹತಾ ಸುತ್ತಿನ ಬಿ ಗುಂಪಿನಲ್ಲಿ 89.34 ಮೀಟರ್ ಗಳ ಬೃಹತ್ ಎಸೆತವನ್ನು ದಾಖಲಿಸಿದರು.

 ಈ ಮೂಲಕ ಒಲಿಂಪಿಕ್ ಕೂಟದಲ್ಲಿ ಎರಡು ಪದಕಗಳನ್ನು ಗೆದ್ದ ಭಾರತದ ಮೋದಲ ಅಥೀಟ್ ಎಂಬ ಹೆಗ್ಗಳಿಕೆಗೆ ನೀರಜ್ ಪಾತ್ರರಾದರು. ಈ ಒಲಿಂಪಿಕ್ಸ್ ನಲ್ಲಿ ಭಾರತಕ್ಕೆ ಒಲಿದ ಒಟ್ಟಾರೆ ಐದನೇ ಪದಕ ಇದಾಗಿದೆ. ಅಲ್ಲದೇ ಇದು ಮೊದಲ ಬೆಳ್ಳಿಯಾಗಿದ್ದು, ಉಳಿದ ನಾಲ್ಕು ಕಂಚಿನ ಪದಕಗಳಾಗಿವೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು