ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆಗೆ ಸಂಬಂಧಿಸಿ 8 ಮಂದಿಯನ್ನು ಪೋಲಿಸರು ಬಂಧಿಸಿದ್ದಾರೆ.
ಮೇ. 1 ರ ರಾತ್ರಿ ಸುಮಾರು 8.30 ರ ಸುಮಾರಿಗೆ ಐದಾರು ಜನರ ತಂಡವೊಂದು ಸುಹಾಸ್ ಶೆಟ್ಟಿ ಕಾರನ್ನು ಗಟ್ಟಿ ಮಂಗಳೂರಿನ ಕಿನ್ನಿಪದವು ಜಂಕ್ಷನ್ ನಲ್ಲಿ ತಲೆವಾರಿನಿಂದ ಅಡ್ಡಲಾಗಿ ಮನಸೊ ಇಚ್ಚೆ ಹಲ್ಲೆ ನಡೆಸಿ ಕೊಲೆ ಮಾಡಿದರು.
ಜನರ ಕಣ್ಣೆದುರು ಮಾರಾಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿ ಆರೋಪಿಗಳು ಕಾರಿನಲ್ಲಿ ಪರಾರಿಯಾಗುತ್ತಿರುವ ದೃಶ್ಯಾವಳಿಗಳು ಸಹ ಪೊಲೀಸರ ಕೈ ಸೇರಿದ್ದು, ಇದೀಗ ಪೊಲೀಸರು 8 ಮಂದಿ ಶಂಕಿತರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
ತಲವಾರು ದಾಳಿ ನಡೆಸಿದ ದುಷ್ಕರ್ಮಿಗಳು ಪರಾರಿಯಾಗಲು ಬಳಸಿದ ಕಾರಿನ ಬಳಿ ಎರಡು ಜನ ಬುರ್ಖಧಾರಿಗಳು ಬಂದು ಸಹಕರಿಸಿದ ವೀಡಿಯೋ ಎಲ್ಲೆಡೆ ಹರಿದಾಡುತ್ತಿರುವವರನ್ನು ಸಹ ಪೊಲೀಸರು ವಶಕ್ಕೆ ಪಡೆಯಲಿದ್ದಾರೆ.
ಘಟನೆ ನಡೆದು 24 ಗಂಟೆಯೊಳಗೆ ಪೊಲೀಸರು 8 ಮಂದಿಯನ್ನು ವಶಕ್ಕೆ ಪಡೆದಿದ್ದು ವಿಚಾರಣೆ ನಡೆಸುತ್ತಿದ್ದಾರೆ, ಸುಹಾಸ್ ಶೆಟ್ಟಿ ಹತ್ಯೆಯ ಮಾಸ್ಟರ್ ಮೈಂಡ್ ಯಾರು ಎಂಬುದು ಪೊಲೀಸ್ ತನಿಖೆಯಿಂದ ತಿಳಿಯಬೇಕಿದೆ.
0 ಕಾಮೆಂಟ್‌ಗಳು