HEADLINES

ಟಾಕ್ಸಿಕ್ ರಿಲೀಸ್ ಡೇಟ್ ಕೊನೆಗೂ ಫಿಕ್ಸ್

ರಾಕಿಂಗ್ ಸ್ಟಾರ್ ಯಶ್ ಸೇರಿದಂತೆ ದಿಗ್ಗಜ ನಟ ನಟಿಯರು ಅಭಿನಯಿಸಿರುವ ಬಹುನಿರೀಕ್ಷಿತ ಪಾನ್ ವರ್ಲ್ಡ್ ಸಿನೆಮಾ 'ಟಾಕ್ಸಿಕ್' ರಿಲೀಸ್ ಡೇಟ್ ಕೊನೆಗೂ ಅಂತಿಮವಾಗಿದೆ.

ಆಗಸ್ಟ್ 26 ರಂದು ವಿಶ್ವದಾದ್ಯಂತ ಟಾಕ್ಸಿಕ್ ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ಅಧಿಕೃತವಾಗಿ ಪೋಸ್ಟರ್ ಬಿಡುಗಡೆ ಮಾಡಿದೆ. ಆರಂಭದಲ್ಲಿ ಮಾರ್ಚ್ 19 ರಂದು ಬಿಡುಗಡೆಯಾಗಬೇಕಿದ್ದ ಟಾಕ್ಸಿಕ್ ಆನಂತರ ಜೂನ್ 04 ಕ್ಕೆ ಮುಂದೂಡಲಾಗಿತ್ತು. ಆ ಬಳಿಕ ಮತ್ತೆ ಚಿತ್ರ ಬಿಡುಗಡೆ ಬಗ್ಗೆ ಅಪ್ಡೇಟ್ ನೀಡಿ, ರಿಲೀಸ್ ದಿನಾಂಕ ಮುಂದೂಡಲಾಗಿದೆ ಎಂದು ಘೋಷಿಸಿತ್ತು. 

ಯಶ್ ಸ್ವತಃ ಕಥೆ ಬರೆದು ನಟಿಸಿರುವ, ಗೀತು ಮೋಹನ್ ದಾಸ್ ನಿರ್ದೇಶನದ ಟಾಕ್ಸಿಕ್ ಬಗ್ಗೆ ಈಗಾಗಲೇ ಭಾರೀ ಕುತೂಹಲ ಮೂಡಿದ್ದು, ಅಭಿಮಾನಿಗಳು ಖಾತರದಿಂದ ಕಾಯುತಿದ್ದಾರೆ 

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು