HEADLINES

ಎರಡು ಮೂರು ದಿನ ಮಳೆಯ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಮುಂಗಾರು ಪ್ರವೇಶದ ನಂತರ ಸರಿಯಾಗಿ ಮಳೆಯಾಗದೇ ಜನ ಕಂಗಾಲಾಗಿರುವ ಮಧ್ಯೆ ಮಳೆಯ ಕುರಿತು ಹವಾಮಾನ ಇಲಾಖೆ ಸೂಚನೆ ನೀಡಿದೆ.
ಮಳೆಗಾಲದ ಸಮಯದಲ್ಲೂ ರಣ ಬಿಸಿಲಿನ ಆರ್ಭಟ ಹೆಚ್ಚಾಗಿದ್ದು, ಮಳೆ ಬರುತ್ತೋ ಇಲ್ವೋ ಅಂತ ಆಕಾಶ ನೋಡ್ತಿದ್ದ ಜನರಿಗೆ ಹವಾಮಾನ ಇಲಾಖೆ ಗುಡ್ನ್ಯೂಸ್ ಕೊಟ್ಟಿದೆ. ಮುಂದಿನ ಎರಡು ದಿನಗಳ ಕಾಲ ರಾಜ್ಯದಲ್ಲಿ ಮಳೆ ಅಲರ್ಟ್ ಘೋಷಣೆ ಮಾಡಿದೆ. 

ಮುಂದಿನ ಎರಡು ದಿನ ರಾಜ್ಯದ 13 ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ. ಬೆಳಗಾವಿ, ಧಾರವಾಡ, ಹಾವೇರಿ, ಕೊಪ್ಪಳ, ಬಳ್ಳಾರಿ, ವಿಜಯನಗರ, ಚಿತ್ರದುರ್ಗ, ಶಿವಮೊಗ್ಗ, ಚಿಕ್ಕಮಗಳೂರು, ಉಡುಪಿ, ದಕ್ಷಿಣ ಕನ್ನಡ, ಕೊಡಗು, ಹಾಸನ ಜಿಲ್ಲೆಗಳಿಗೆ ಭಾರತೀಯ ಹವಾಮಾನ ಇಲಾಖೆ ಮಳೆಯ ಎಚ್ಚರಿಕೆ ನೀಡಿದೆ.

ಜೂನ್ 21 ರಿಂದ 27 ವರೆಗೆ ದಕ್ಷಿಣ ಕನ್ನಡದಲ್ಲಿ ಸತತವಾಗಿ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ತಿಳಿಸಲಾಗಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು