HEADLINES

ಕಾವು ಪಂಚವಟಿ ನಗರ ರಿಕ್ಷಾ ತಂಗುದಾಣ ನಿರ್ಮಾಣಕ್ಕೆ ಶಾಸಕ ಅಶೋಕ್ ಕುಮಾರ್ ರೈ ಅವರಿಗೆ ಮನವಿ

ಕಾವು ಪಂಚವಟಿ ನಗರದ ರಿಕ್ಷಾ ಚಾಲಕರು ಸ್ನೇಹ ಸಂಗಮ ಸಂಘದ ಅಧ್ಯಕ್ಷರು ಹಾಗೂ ಸದಸ್ಯರು ಮಾನ್ಯ ಶಾಸಕ ಅಶೋಕ್ ಕುಮಾರ್ ರೈ ಅವರನ್ನು ಭೇಟಿ ಮಾಡಿ, ಕಾವು ಪಂಚವಟಿ ನಗರದಲ್ಲಿ ರಿಕ್ಷಾ ಚಾಲಕರ ಅನುಕೂಲಕ್ಕಾಗಿ ಶಾಶ್ವತ ರಿಕ್ಷಾ ತಂಗುದಾಣ ನಿರ್ಮಿಸಿಕೊಡುವಂತೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ರಿಕ್ಷಾ ಚಾಲಕರು, ತಂಗುದಾಣದ ಕೊರತೆಯಿಂದ ಎದುರಾಗುತ್ತಿರುವ ಸಮಸ್ಯೆಗಳನ್ನು ಶಾಸಕರ ಗಮನಕ್ಕೆ ತಂದರು. ಸಾರ್ವಜನಿಕರು ಹಾಗೂ ಚಾಲಕರಿಗೆ ಅನುಕೂಲವಾಗುವಂತೆ ಸೂಕ್ತ ಸ್ಥಳದಲ್ಲಿ ರಿಕ್ಷಾ ತಂಗುದಾಣ ನಿರ್ಮಾಣಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ವಿನಂತಿಸಿದರು.

ಮನವಿಯನ್ನು ಸ್ವೀಕರಿಸಿದ ಶಾಸಕ ಅಶೋಕ್ ಕುಮಾರ್ ರೈ ಅವರು, ಚಾಲಕರ ಬೇಡಿಕೆಯನ್ನು ಸಕಾರಾತ್ಮಕವಾಗಿ ಪರಿಗಣಿಸಿ 5 ಲಕ್ಷ ಅನುದಾನವನ್ನು ನೀಡುವುದಾಗಿ ಭರವಸೆ ನೀಡಿದರು.

ಈ ವೇಳೆ ರಿಕ್ಷಾ ಚಾಲಕರು ಸ್ನೇಹ ಸಂಗಮದ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು