ಪುತ್ತೂರು ತಾಲೂಕಿನ ಇರ್ದೆ ಗ್ರಾಮದ 18 ವರ್ಷದ ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ನಡೆದಿದೆ.
ಮೃತನನ್ನು ಗಂಗಾಧರ ಮುಡಿವಾಳ ಅವರ ಪುತ್ರ ತಿಲಕ್ (18) ಎಂದು ಗುರುತಿಸಲಾಗಿದೆ. ಜುಲೈ 06 ರಂದು ತಮ್ಮ ಮನೆಯ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ತಿಲಕ್ ಪತ್ತೆಯಾಗಿದ್ದು, ಕುಟುಂಬದವರು ತಕ್ಷಣ ಗಮನಿಸಿ ಆಸ್ಪತ್ರೆಗೆ ಕರೆದೊಯ್ದರೂ ವೈದ್ಯರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.
ಘಟನೆಯ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಈ ಕುರಿತು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.
0 ಕಾಮೆಂಟ್‌ಗಳು