ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ನಿರಂತರ ಮಳೆ ಹಾಗೂ ಪ್ರತಿಕೂಲ ಹವಾಮಾನ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಜಿಲ್ಲಾಡಳಿತವು ನಾಳೆ (ಜುಲೈ 2 ರಂದು) ಪಿಯುಸಿ ವರೆಗೆ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದೆ.
ವಿದ್ಯಾರ್ಥಿಗಳ ಸುರಕ್ಷತೆಯನ್ನು ಆದ್ಯತೆಯಾಗಿ ಪರಿಗಣಿಸಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಗಳು ಸೇರಿದಂತೆ ಪಿಯುಸಿ ಕಾಲೇಜುಗಳಿಗೂ ರಜೆ ಅನ್ವಯವಾಗಲಿದೆ.
ಜಿಲ್ಲೆಯಲ್ಲಿ ಮಳೆಯ ತೀವ್ರತೆ ಮುಂದುವರಿಯುವ ಸಾಧ್ಯತೆ ಇರುವುದರಿಂದ ವಿದ್ಯಾರ್ಥಿಗಳು, ಪೋಷಕರು ಹಾಗೂ ಸಾರ್ವಜನಿಕರು ಅನಗತ್ಯವಾಗಿ ಹೊರಗಡೆ ಸಂಚರಿಸುವುದನ್ನು ತಪ್ಪಿಸಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸುವಂತೆ ಜಿಲ್ಲಾಡಳಿತ ಮನವಿ ಮಾಡಿದೆ.
0 ಕಾಮೆಂಟ್‌ಗಳು