ಆದರೆ ಪದವಿ, ಸ್ನಾತಕೋತ್ತರ, ಡಿಪ್ಲೊಮಾ, ಇಂಜಿನಿಯರಿಂಗ್ ಹಾಗೂ ಐಟಿಐ ಸೇರಿದಂತೆ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ರಜೆ ಅನ್ವಯಿಸುವುದಿಲ್ಲ ಎಂದು ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.
ಇದೇ ವೇಳೆ, ತಗ್ಗು ಪ್ರದೇಶದ ನಿವಾಸಿಗಳು, ನದಿ ಹಾಗೂ ಕೆರೆಗಳ ಸಮೀಪ ವಾಸಿಸುವವರು, ಗುಡ್ಡಗಾಡು ಪ್ರದೇಶದ ಜನರು ಮತ್ತು ಮೀನುಗಾರರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಜಿಲ್ಲಾಡಳಿತ ಮನವಿ ಮಾಡಿದೆ. ಸಾರ್ವಜನಿಕರು ಅನಗತ್ಯವಾಗಿ ಹೊರ ಸಂಚಾರ ಮಾಡದಂತೆ ಹಾಗೂ ತುರ್ತು ಸಂದರ್ಭಗಳಲ್ಲಿ ಜಿಲ್ಲಾಡಳಿತದ ಸೂಚನೆಗಳನ್ನು ಪಾಲಿಸುವಂತೆ ತಿಳಿಸಲಾಗಿದೆ.
0 ಕಾಮೆಂಟ್‌ಗಳು