HEADLINES

ಬಿಸಿ ರೋಡ್ ನಲ್ಲಿ ಬೆಚ್ಚಿಬೀಳಿಸಿದ ಘಟನೆ: ಯುವತಿಯ ಮೇಲೆ ಚೂರಿ ಇರಿತ, ಸಾವು

ಬಿ.ಸಿ ರೋಡ್‌ನ ಕೆಎಸ್‌ಆರ್‌ಟಿಸಿ ನೂತನ ಬಸ್ ನಿಲ್ದಾಣದ ಬಳಿ ಚೂರಿಯಿಂದ ಇರಿದು ತೀವ್ರ ಗಾಯಗೊಂಡ ಯುವತಿ ಮೃತಪಟ್ಟಿದ್ದಾರೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ಯುವಕನೊಬ್ಬ ಯುವತಿಯ ಮೇಲೆ ಚೂರಿಯಿಂದ ಹಲ್ಲೆ ನಡೆಸಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಯುವತಿಯನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಬಂಟ್ವಾಳ ನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ಆರೋಪಿಯ ಪತ್ತೆಗಾಗಿ ಶೋಧ ಕಾರ್ಯ ಮುಂದುವರಿದಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು