HEADLINES

ಮಂಗಳೂರು ಭಾರೀ ಮಳೆಗೆ ಗೋಡೆ ಕುಸಿತ: ಮೂವರು ಮೃತ್ಯು

ಮಂಗಳೂರು ನಗರದಲ್ಲಿ ಸುರಿದ ಭಾರೀ ಮಳೆಯ ಪರಿಣಾಮ ಬುಧವಾರ ಮುಂಜಾನೆ ಕಂಕನಾಡಿ ಸಮೀಪದ ನಾಗೋರಿ ಪ್ರದೇಶದಲ್ಲಿ ಭೂ ಕುಸಿತ ಉಂಟಾಗಿ ಮನೆಯ ಮೇಲೆ ಗೋಡೆ ಕುಸಿದಿದೆ. ಈ ದುರ್ಘಟನೆಯಲ್ಲಿ ಇಬ್ಬರು ಬಾಲಕಿಯರು ಸೇರಿದಂತೆ ಮೂವರು ಮೃತಪಟ್ಟಿದ್ದಾರೆ.

ನಿರಂತರ ಮಳೆಯಿಂದ ನೆಲ ಸಡಿಲಗೊಂಡ ಪರಿಣಾಮ ಮನೆ ಸಮೀಪದ ಮಣ್ಣು ಹಾಗೂ ಗೋಡೆ ಏಕಾಏಕಿ ಕುಸಿದು, ಹೆಂಚಿನ ಮನೆಯ ಮೇಲೆ ಬಿದ್ದಿದೆ. ಸ್ಥಳೀಯರು ತಕ್ಷಣವೇ ರಕ್ಷಣಾ ಕಾರ್ಯ ಆರಂಭಿಸಿದ್ದು, ಬಳಿಕ ಅಗ್ನಿಶಾಮಕ ದಳ ಹಾಗೂ ಪೊಲೀಸರು ಸ್ಥಳಕ್ಕೆ ಧಾವಿಸಿ ಅವಶೇಷಗಳಡಿ ಸಿಲುಕಿದ್ದವರನ್ನು ಹೊರತೆಗೆದರು.

ಮೃತದೇಹಗಳನ್ನು ಆಸ್ಪತ್ರೆಗೆ ರವಾನಿಸಲಾಗಿದ್ದು, ಘಟನೆಯ ಕುರಿತು ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದಾರೆ. ಭಾರೀ ಮಳೆಯ ಹಿನ್ನೆಲೆ ಗುಡ್ಡಗಾಡು ಮತ್ತು ಭೂಕುಸಿತ ಸಂಭವಿಸುವ ಪ್ರದೇಶಗಳ ನಿವಾಸಿಗಳು ಎಚ್ಚರಿಕೆಯಿಂದ ಇರಬೇಕೆಂದು ಜಿಲ್ಲಾಡಳಿತ ಮನವಿ ಮಾಡಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು