HEADLINES

ಉತ್ತರ ಪ್ರದೇಶದಲ್ಲಿ ಭೀಕರ ಟ್ಯಾಂಕರ್ ದುರಂತ: ಟೋಲ್ ಪ್ಲಾಜಾಗೆ ಡಿಕ್ಕಿ, ಸ್ಫೋಟದಲ್ಲಿ ಐವರು ಸಾವು

ಉತ್ತರ ಪ್ರದೇಶದ ಕೌಶಾಂಬಿ ಜಿಲ್ಲೆಯಲ್ಲಿ ಎಲ್‌ಪಿಜಿ (LPG) ಸಾಗಿಸುತ್ತಿದ್ದ ಟ್ಯಾಂಕರ್ ಟೋಲ್ ಪ್ಲಾಜಾಗೆ ಡಿಕ್ಕಿ ಹೊಡೆದ ಪರಿಣಾಮ ಭೀಕರ ಸ್ಫೋಟ ಸಂಭವಿಸಿದೆ. ಅಪಘಾತದ ತೀವ್ರತೆಗೆ ಟೋಲ್ ಪ್ಲಾಜಾ ಪ್ರದೇಶದಲ್ಲಿ ಬೆಂಕಿ ವ್ಯಾಪಿಸಿ ಕೆಲ ವಾಹನಗಳಿಗೂ ಹಾನಿಯಾಗಿದೆ.

ಘಟನೆಯಲ್ಲಿ ಐವರು ಮೃತಪಟ್ಟಿದ್ದು, ಕನಿಷ್ಠ ಏಳು ಮಂದಿ ಗಾಯಗೊಂಡಿದ್ದಾರೆ ಎಂದು ಪ್ರಾಥಮಿಕ ಮಾಹಿತಿ ತಿಳಿಸಿದೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಸುದ್ದಿ ತಿಳಿದ ತಕ್ಷಣ ಅಗ್ನಿಶಾಮಕ ದಳ, ಪೊಲೀಸರು ಹಾಗೂ ಸ್ಥಳೀಯ ಆಡಳಿತದ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದರು. ಅಪಘಾತದ ಕಾರಣವನ್ನು ಪತ್ತೆಹಚ್ಚಲು ತನಿಖೆ ಆರಂಭಿಸಲಾಗಿದ್ದು, ಘಟನೆಯ ಬಳಿಕ ಕೆಲಕಾಲ ಆ ಮಾರ್ಗದಲ್ಲಿ ವಾಹನ ಸಂಚಾರಕ್ಕೂ ಅಡಚಣೆ ಉಂಟಾಯಿತು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು