ಬೆಂಗಳೂರು: ರಾಜ್ಯದ ವಿದ್ಯುತ್ ವಿತರಣಾ ಸಂಸ್ಥೆಗಳ ಖಾಸಗೀಕರಣದ ಪ್ರಸ್ತಾಪಕ್ಕೆ ಮಹತ್ವದ ತಿರುವು ಸಿಕ್ಕಿರುವುದಾಗಿ ವರದಿಯಾಗಿದೆ. ಮೆಸ್ಕಾಂ ಸೇರಿದಂತೆ ರಾಜ್ಯದ ಇಎಸ್‌ಕಾಂಗಳ ವ್ಯಾಪ್ತಿಯಲ್ಲಿ ವಿದ್ಯುತ್ ವಿತರಣಾ ಪರವಾನಗಿ ಪಡೆಯಲು ಮುಂದಾಗಿದ್ದ ಟಾಟಾ ಪವರ್ ಲಿಮಿಟೆಡ್ ತನ್ನ ಅರ್ಜಿಯನ್ನು ಹಿಂಪಡೆಯುವ ನಿರ್ಧಾರ ಕೈಗೊಂಡಿದೆ ಎಂದು ತಿಳಿದುಬಂದಿದೆ.
ರಾಜ್ಯ ಸರ್ಕಾರ ಆರಂಭದಿಂದಲೇ ವಿದ್ಯುತ್ ವಿತರಣಾ ಸಂಸ್ಥೆಗಳ ಖಾಸಗೀಕರಣದ ಬಗ್ಗೆ ವಿರೋಧ ವ್ಯಕ್ತಪಡಿಸಿದ್ದು, ಇಎಸ್‌ಕಾಂಗಳು ಸಹ ನಿಯಂತ್ರಣ ಆಯೋಗದ ಮುಂದೆ ತಮ್ಮ ಆಕ್ಷೇಪಣೆಗಳನ್ನು ಸಲ್ಲಿಸಿದ್ದವು. ಸರ್ಕಾರದ ನಿಲುವು ಮತ್ತು ವಿವಿಧ ವಲಯಗಳಿಂದ ವ್ಯಕ್ತವಾದ ವಿರೋಧದ ಹಿನ್ನೆಲೆಯಲ್ಲಿ ಟಾಟಾ ಪವರ್ ಈ ನಿರ್ಧಾರ ಕೈಗೊಂಡಿದೆ ಎನ್ನಲಾಗಿದೆ.
ಈ ಬೆಳವಣಿಗೆಯಿಂದ ಮೆಸ್ಕಾಂ ಸೇರಿದಂತೆ ರಾಜ್ಯದ ಸರ್ಕಾರಿ ವಿದ್ಯುತ್ ವಿತರಣಾ ಸಂಸ್ಥೆಗಳ ಖಾಸಗೀಕರಣ ಪ್ರಕ್ರಿಯೆಗೆ ಸದ್ಯಕ್ಕೆ ಹಿನ್ನಡೆಯಾಗಿದೆ. ಸಾರ್ವಜನಿಕ ವಲಯದಲ್ಲೇ ವಿದ್ಯುತ್ ವಿತರಣಾ ಸೇವೆಯನ್ನು ಮುಂದುವರಿಸುವ ಸರ್ಕಾರದ ನಿಲುವಿಗೆ ಇದರಿಂದ ಮತ್ತಷ್ಟು ಬಲ ಸಿಕ್ಕಿದೆ ಎಂದು ಹೇಳಲಾಗುತ್ತಿದೆ.
0 ಕಾಮೆಂಟ್‌ಗಳು