HEADLINES

ರೋಟರ್ಯಾಕ್ಟ್ ಕ್ಲಬ್ ಪ್ರಗತಿ ಪ್ಯಾರಾಮೆಡಿಕಲ್‌ನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

ಪುತ್ತೂರು: ರೋಟರ್ಯಾಕ್ಟ್ ಕ್ಲಬ್ ಪ್ರಗತಿ ಪ್ಯಾರಾಮೆಡಿಕಲ್‌ನ 2026–27ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಗೌರವಯುತವಾಗಿ ನಡೆಯಿತು.

ಕ್ಲಬ್ ಸಭಾಪತಿ ಮತ್ತು ಕಾಲೇಜಿನ ಪ್ರಾಂಶುಪಾಲರಾದ ಪ್ರೀತಾ ಹೆಗ್ಡೆ ಅವರ ಉಪಸ್ಥಿತಿಯಲ್ಲಿ ನಡೆದ ಸಮಾರಂಭದಲ್ಲಿ, ರೋಟರಿ ಕ್ಲಬ್ ಪುತ್ತೂರಿನ ಅಧ್ಯಕ್ಷರಾದ ರೊ. PHF. ದತ್ತಾತ್ರೇಯ ರಾವ್ ಅವರು ನೂತನ ಪದಾಧಿಕಾರಿಗಳಿಗೆ ಅಧಿಕಾರ ಹಸ್ತಾಂತರಿಸಿ ಪದಪ್ರದಾನ ನೆರವೇರಿಸಿದರು.

ಈ ಸಂದರ್ಭದಲ್ಲಿ ರೋ. ಧನ್ಯಶ್ರೀ ಅವರು ಅಧ್ಯಕ್ಷರಾಗಿ ಹಾಗೂ ರೋ. ಪ್ರೀತೇಶ್ ಅವರು ಕಾರ್ಯದರ್ಶಿಯಾಗಿ ಅಧಿಕಾರ ಸ್ವೀಕರಿಸಿದರು. ನಿರ್ಗಮಿತ ಅಧ್ಯಕ್ಷ ರೋ. ರಂಜಿತ್ ಹಾಗೂ ನಿರ್ಗಮಿತ ಕಾರ್ಯದರ್ಶಿರೋ. ದಿವ್ಯ ಅವರು ನೂತನ ತಂಡಕ್ಕೆ ಅಧಿಕಾರ ಹಸ್ತಾಂತರಿಸಿ ಶುಭ ಹಾರೈಸಿದರು.

ಮುಖ್ಯ ಅತಿಥಿಗಳಾಗಿ ರೋಟರಿ ಕ್ಲಬ್ ಪುತ್ತೂರಿನ ಯುವಜನ ಸೇವಾ ನಿರ್ದೇಶಕರಾದ ರೊ. ಸುಬ್ಬಪ್ಪ ಕೈಕಂಬ, ಸಹಾಯಕ ಜಿಲ್ಲಾ ಪ್ರತಿನಿಧಿ ರೋ. ನವೀನ್ ರೈ ಬನ್ನೂರು ಹಾಗೂ ಕೆನರಾ ವಲಯ ಪ್ರತಿನಿಧಿ ರೋ. ಎಡ್ವರ್ಡ್ ಪುತ್ತೂರು ಭಾಗವಹಿಸಿ, ನೂತನ ಪದಾಧಿಕಾರಿಗಳಿಗೆ ಶುಭಾಶಯಗಳನ್ನು ತಿಳಿಸಿ ಸೇವಾ ಕಾರ್ಯಗಳನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಮುನ್ನಡೆಸುವಂತೆ ಕರೆ ನೀಡಿದರು.

ಕಾರ್ಯಕ್ರಮವನ್ನು ಶುಭಲಕ್ಷ್ಮಿ ಮತ್ತು ತಂಡದವರಿಂದ ಪ್ರಾರ್ಥನೆಯೊಂದಿಗೆ ಆರಂಭಿಸಲಾಯಿತು. ನಿರ್ಗಮಿತ ಕಾರ್ಯದರ್ಶಿ ದಿವ್ಯ ವಾರ್ಷಿಕ ವರದಿಯನ್ನು ವಾಚಿಸಿದರು. ಹರಿಪ್ರಿಯಾ, ಅಭಿಜ್ಞಾ, ರೇಷ್ಮಾ ಹಾಗೂ ಜೇಷ್ಮಾ ಅತಿಥಿಗಳನ್ನು ಪರಿಚಯಿಸಿದರು. ಚೈತ್ರಾ ಮತ್ತು ಮನಿಷಾ ಕಾರ್ಯಕ್ರಮವನ್ನು ನಿರೂಪಿಸಿದರು. ನಿರ್ಗಮಿತ ಅಧ್ಯಕ್ಷ ರಂಜಿತ್ ಸ್ವಾಗತಿಸಿದರು. ನೂತನ ಕಾರ್ಯದರ್ಶಿ ಪ್ರೀತೇಶ್ ವಂದನಾರ್ಪಣೆ ಸಲ್ಲಿಸಿದರು.

ಕಾರ್ಯಕ್ರಮದಲ್ಲಿ ರೋಟರಿ ಹಾಗೂ ರೋಟರ್ಯಾಕ್ಟ್ ಸದಸ್ಯರು, ಕಾಲೇಜಿನ ಅಧ್ಯಾಪಕರು, ವಿದ್ಯಾರ್ಥಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದು, ನೂತನ ಪದಾಧಿಕಾರಿಗಳಿಗೆ ಶುಭ ಹಾರೈಸಿದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು