ಪುತ್ತೂರು: ಕೇಂದ್ರ ಸರ್ಕಾರದ ವಿರುದ್ಧ ನೀಟ್ ಪರೀಕ್ಷೆಯಲ್ಲಿನ ಅಕ್ರಮಗಳ ಆರೋಪ ಹಾಗೂ ಕಾಂಗ್ರೆಸ್ ನಾಯಕ, ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿಯವರ ಬಂಧನವನ್ನು ಖಂಡಿಸಿ ಪುತ್ತೂರಿನ ಗಾಂಧಿಕಟ್ಟೆ ಬಳಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಈ ಪ್ರತಿಭಟನೆಯನ್ನು ಪುತ್ತೂರು, ಉಪ್ಪಿನಂಗಡಿ ಮತ್ತು ವಿಟ್ಲ ಬ್ಲಾಕ್ ಕಾಂಗ್ರೆಸ್ ಸಮಿತಿಗಳು, ಯುವ ಕಾಂಗ್ರೆಸ್ ಹಾಗೂ ಎನ್‌ಎಸ್‌ಯುಐ ಸಂಯುಕ್ತವಾಗಿ ಆಯೋಜಿಸಿದ್ದವು.
ಪ್ರತಿಭಟನೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ ಕಾರ್ಯಕರ್ತರು, ನೀಟ್ ಪರೀಕ್ಷೆಯಲ್ಲಿ ನಡೆದಿರುವ ಅಕ್ರಮಗಳ ಬಗ್ಗೆ ಸಮಗ್ರ ತನಿಖೆ ನಡೆಸಬೇಕು ಹಾಗೂ ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿದರು. ಇದೇ ವೇಳೆ ರಾಹುಲ್ ಗಾಂಧಿಯವರ ಬಂಧನವನ್ನು ಪ್ರಜಾಪ್ರಭುತ್ವ ವಿರೋಧಿ ಕ್ರಮ ಎಂದು ಖಂಡಿಸಿ, ಇಂತಹ ಕ್ರಮಗಳನ್ನು ತಕ್ಷಣವೇ ನಿಲ್ಲಿಸಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಕಾಂಗ್ರೆಸ್, ಯುವ ಕಾಂಗ್ರೆಸ್ ಹಾಗೂ ಎನ್‌ಎಸ್‌ಯುಐ ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಮುಖಂಡರು ಭಾಗವಹಿಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

0 ಕಾಮೆಂಟ್‌ಗಳು