ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಜಿಲ್ಲಾಡಳಿತವು ಜುಲೈ 25, 2026 (ಶನಿವಾರ) ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು, ಪದವಿ ಪೂರ್ವ ಕಾಲೇಜುಗಳು (12ನೇ ತರಗತಿವರೆಗೆ) ಹಾಗೂ ಐಟಿಐ ಮತ್ತು ಡಿಪ್ಲೊಮಾ ಕಾಲೇಜುಗಳಿಗೆ ರಜೆ ಘೋಷಿಸಿದೆ.
ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಈ ಕುರಿತು ಆದೇಶ ಹೊರಡಿಸಿದ್ದು, ವಿದ್ಯಾರ್ಥಿಗಳು ಅನಗತ್ಯವಾಗಿ ಹೊರಗಡೆ ಸಂಚರಿಸದಂತೆ ಪಾಲಕರು ಮುನ್ನೆಚ್ಚರಿಕೆ ವಹಿಸುವಂತೆ ಮನವಿ ಮಾಡಿದ್ದಾರೆ.
ಆದೇಶದ ಪ್ರಕಾರ, ಶಿಕ್ಷಕರು ಹಾಗೂ ಸಿಬ್ಬಂದಿ ಎಂದಿನಂತೆ ಕರ್ತವ್ಯಕ್ಕೆ ಹಾಜರಾಗಬೇಕು. ಜಿಲ್ಲೆಯಲ್ಲಿ ಮಳೆ, ಗಾಳಿ ಹಾಗೂ ಭೂಕುಸಿತದ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ನದಿ, ಹೊಳೆ, ಕೆರೆ, ಸಮುದ್ರ ತೀರ ಸೇರಿದಂತೆ ಅಪಾಯದ ಪ್ರದೇಶಗಳಿಗೆ ತೆರಳದಂತೆ ಸೂಚಿಸಲಾಗಿದೆ.

0 ಕಾಮೆಂಟ್‌ಗಳು