ಜಿಲ್ಲೆಯಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆ ಹಾಗೂ ಹವಾಮಾನ ಇಲಾಖೆಯ ರೆಡ್ ಅಲರ್ಟ್ ಹಿನ್ನೆಲೆಯಲ್ಲಿ, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಅವರು ಜುಲೈ 18 (ಶನಿವಾರ) ರಂದು ಜಿಲ್ಲೆಯ ಎಲ್ಲಾ ಅಂಗನವಾಡಿಗಳು, ಪ್ರಾಥಮಿಕ ಶಾಲೆಗಳು, ಪ್ರೌಢಶಾಲೆಗಳು ಹಾಗೂ ದ್ವಿತೀಯ ಪಿಯುಸಿ (2nd PUC) ವರೆಗೆ ಇರುವ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಿದ್ದಾರೆ.
ಜಿಲ್ಲಾಡಳಿತವು ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಅನಗತ್ಯವಾಗಿ ಮನೆಯಿಂದ ಹೊರಬರದಂತೆ, ನದಿ, ಹೊಳೆ, ಸಮುದ್ರ ತೀರ ಮತ್ತು ತಗ್ಗು ಪ್ರದೇಶಗಳಿಗೆ ತೆರಳದಂತೆ ಎಚ್ಚರಿಕೆ ವಹಿಸಲು ಸೂಚಿಸಿದೆ. ಹವಾಮಾನ ಪರಿಸ್ಥಿತಿಯನ್ನು ಗಮನಿಸಿ ಜಿಲ್ಲಾಡಳಿತದ ಅಧಿಕೃತ ಪ್ರಕಟಣೆಗಳನ್ನು ಅನುಸರಿಸುವಂತೆ ಮನವಿ ಮಾಡಲಾಗಿದೆ.
ಭಾರೀ ಮಳೆಯ ಸಾಧ್ಯತೆ ಮುಂದುವರಿದಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಜಿಲ್ಲಾಡಳಿತ ಸಲಹೆ ನೀಡಿದೆ.

0 ಕಾಮೆಂಟ್‌ಗಳು