ಕಳೆದ ಕೆಲವು ವಾರಗಳಿಂದ ವಿದ್ಯಾರ್ಥಿ ಸಂಘಟನೆಗಳು, ವಿರೋಧ ಪಕ್ಷಗಳು ಮತ್ತು ಸಾರ್ವಜನಿಕರಿಂದ ವ್ಯಕ್ತವಾಗುತ್ತಿದ್ದ ತೀವ್ರ ಒತ್ತಡಕ್ಕೆ ಮಣಿದಿರುವ ಸಚಿವರು, ಇಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಪತ್ರವನ್ನು ರವಾನಿಸಿದ್ದಾರೆ.
ಜಂತರ್ ಮಂತರ್ ಪ್ರತಿಭಟನೆಗೆ ಸಂದ ಜಯ:
NEET ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ವ್ಯಾಪಕ ಭ್ರಷ್ಟಾಚಾರ ಮತ್ತು ಅಕ್ರಮಗಳನ್ನು ಖಂಡಿಸಿ ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳು ಹಾಗೂ ವಿವಿಧ ರಾಜಕೀಯ ಸಂಘಟನೆಗಳು ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದ್ದವು. ಸಚಿವರ ರಾಜೀನಾಮೆಗೆ ಪಟ್ಟು ಹಿಡಿದು ನಡೆಸುತ್ತಿದ್ದ ಈ ನಿರಂತರ ಹೋರಾಟಕ್ಕೆ ಕೊನೆಗೂ ಮಣಿದಿರುವ ಕೇಂದ್ರ ಸರ್ಕಾರ, ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಯನ್ನು ಅಂಗೀಕರಿಸಿದೆ ಎನ್ನಲಾಗಿದೆ.

0 ಕಾಮೆಂಟ್‌ಗಳು