HEADLINES

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ತನಿಖೆಯಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಮತ್ತೊಂದು ಮಹತ್ವದ ಯಶಸ್ಸು ಸಾಧಿಸಿದೆ. ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಗಳಾದ ಅಬ್ದುಲ್ ನಾಸಿರ್ ಹಾಗೂ ನೌಷಾದ್ ಅವರನ್ನು ಅಧಿಕಾರಿಗಳು ಬಂಧಿಸಿದ್ದಾರೆ.

2022ರ ಜುಲೈ 26ರಂದು ಬೆಳ್ಳಾರೆಯಲ್ಲಿ ನಡೆದ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಬಳಿಕ ಇಬ್ಬರೂ ತಲೆಮರೆಸಿಕೊಂಡಿದ್ದರು. ಸತತ ಶೋಧ ಕಾರ್ಯಾಚರಣೆ ನಡೆಸಿದ ಎನ್‌ಐಎ ಅಧಿಕಾರಿಗಳು ಕೇರಳ ಹಾಗೂ ತಮಿಳುನಾಡಿನಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.

ಪ್ರಕರಣದಲ್ಲಿ ಇಬ್ಬರ ವಿರುದ್ಧ ಈಗಾಗಲೇ ದೋಷಾರೋಪಣಾ ಪಟ್ಟಿ ಸಲ್ಲಿಕೆಯಾಗಿದ್ದು, ಕಳೆದ 4 ವರ್ಷಗಳಿಂದ ಇವರಿಗಾಗಿ ತನಿಖಾ ಸಂಸ್ಥೆ ಹುಡುಕಾಟ ನಡೆಸುತ್ತಿತ್ತು. ಬಂಧನದ ಬಳಿಕ ಇಬ್ಬರನ್ನೂ ವಿಚಾರಣೆಗೆ ಒಳಪಡಿಸಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಸಂಗ್ರಹಿಸುವ ಕಾರ್ಯ ಮುಂದುವರಿದಿದೆ.

ಇಬ್ಬರು ಪ್ರಮುಖ ಆರೋಪಿಗಳ ಬಂಧನದಿಂದ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ತನಿಖೆಗೆ ಮತ್ತಷ್ಟು ವೇಗ ಸಿಗುವ ನಿರೀಕ್ಷೆ ವ್ಯಕ್ತವಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಉಳಿದ ಅಂಶಗಳ ಬಗ್ಗೆಯೂ ಎನ್‌ಐಎ ತನಿಖೆ ಮುಂದುವರಿಸಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು