ಪುತ್ತೂರು: ಜಿಡೆಕಲ್ಲು ಪ್ರಥಮ ದರ್ಜೆ ಸರ್ಕಾರಿ ಕಾಲೇಜಿಗೆ ತೆರಳುವ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಹೆಚ್ಚುವರಿ ಸರ್ಕಾರಿ ಬಸ್ ಸೇವೆ ಕಲ್ಪಿಸುವಂತೆ ವಿದ್ಯಾರ್ಥಿಗಳ ನಿಯೋಗವು ಶಾಸಕ ಅಶೋಕ್ ರೈ ಅವರಿಗೆ ಮನವಿ ಸಲ್ಲಿಸಿದೆ.
ಶಾಸಕರ ಕಚೇರಿಗೆ ಭೇಟಿ ನೀಡಿದ ವಿದ್ಯಾರ್ಥಿಗಳು, ಕಾಲೇಜಿನಲ್ಲಿ 150ಕ್ಕೂ ಹೆಚ್ಚು ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿರುವುದಾಗಿ ತಿಳಿಸಿದರು. ಪ್ರಸ್ತುತ ಬೆಳಗ್ಗೆ ಹಾಗೂ ಸಂಜೆ ತಲಾ ಒಂದೇ ಬಸ್ ಸಂಚರಿಸುತ್ತಿದ್ದು, ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಿರುವುದರಿಂದ ಒಂದೇ ಬಸ್‌ನಲ್ಲಿ ಎಲ್ಲರೂ ಪ್ರಯಾಣಿಸಲು ತೊಂದರೆಯಾಗುತ್ತಿದೆ ಎಂದು ಅವರು ಮನವಿಯಲ್ಲಿ ಉಲ್ಲೇಖಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಬೆಳಿಗ್ಗೆ 8.50 ಹಾಗೂ 9.10 ಗಂಟೆಗೆ ಮತ್ತು ಸಂಜೆ 3.30 ಹಾಗೂ 4.30 ಗಂಟೆಗೆ ಹೆಚ್ಚುವರಿ ಸರ್ಕಾರಿ ಬಸ್‌ಗಳನ್ನು ಸಂಚರಿಸುವಂತೆ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ವಿದ್ಯಾರ್ಥಿಗಳು ಶಾಸಕರನ್ನು ವಿನಂತಿಸಿದ್ದಾರೆ.

0 ಕಾಮೆಂಟ್‌ಗಳು