ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ, ಉಪ್ಪಿನಂಗಡಿ, ಸುಳ್ಯ ಹಾಗೂ ಬಂಟ್ವಾಳ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರಮುಖ ಜಂಕ್ಷನ್‌ಗಳಲ್ಲಿ ಅತ್ಯಾಧುನಿಕ AI ಆಧಾರಿತ ನಿಗಾ ಕ್ಯಾಮೆರಾಗಳು ಕಾರ್ಯಾರಂಭಿಸಿವೆ.
ಸಂಚಾರ ನಿಯಮ ಉಲ್ಲಂಘನೆಗಳನ್ನು ತಡೆಯುವ ಉದ್ದೇಶದಿಂದ ಅಳವಡಿಸಿರುವ ಈ ಕ್ಯಾಮೆರಾಗಳು ಹೆಲ್ಮೆಟ್ ಧರಿಸದಿರುವುದು, ಸೀಟ್‌ಬೆಲ್ಟ್ ಬಳಸದಿರುವುದು, ಮೊಬೈಲ್‌ನಲ್ಲಿ ಮಾತನಾಡುತ್ತ ವಾಹನ ಚಾಲನೆ ಮಾಡುವುದು ಸೇರಿದಂತೆ ವಿವಿಧ ಉಲ್ಲಂಘನೆಗಳನ್ನು ಸ್ವಯಂಚಾಲಿತವಾಗಿ ಪತ್ತೆಹಚ್ಚಲಿವೆ.
ನಿಯಮ ಉಲ್ಲಂಘನೆ ದಾಖಲಾಗುತ್ತಿದ್ದಂತೆ ವಾಹನದ ನೋಂದಣಿ ಸಂಖ್ಯೆಯ ಆಧಾರದ ಮೇಲೆ ಇ-ಚಲನ್ (e-Challan) ನೀಡಲಾಗುತ್ತದೆ. ಸಂಚಾರ ಶಿಸ್ತು ಹೆಚ್ಚಿಸುವ ಹಾಗೂ ಅಪಘಾತಗಳನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಈ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ.
ಸಾರ್ವಜನಿಕರು ಸಂಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಸುರಕ್ಷಿತವಾಗಿ ವಾಹನ ಚಲಾಯಿಸುವಂತೆ ಪೊಲೀಸರು ಮನವಿ ಮಾಡಿದ್ದಾರೆ.

0 ಕಾಮೆಂಟ್‌ಗಳು