ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆ ಹಾಗೂ ಹವಾಮಾನ ಇಲಾಖೆಯ ಮುನ್ಸೂಚನೆಯ ಹಿನ್ನೆಲೆಯಲ್ಲಿ, ಪುತ್ತೂರು ಉಪವಿಭಾಗ ವ್ಯಾಪ್ತಿಯ ಪುತ್ತೂರು, ಬೆಳ್ತಂಗಡಿ, ಸುಳ್ಯ ಹಾಗೂ ಕಡಬ ತಾಲೂಕುಗಳಲ್ಲಿ ಶನಿವಾರ (ಆಗಸ್ಟ್ 8) ಶಾಲೆ ಹಾಗೂ ಕೆಲವು ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಈ ಕುರಿತು ಆದೇಶ ಹೊರಡಿಸಿದ್ದಾರೆ.
ರಜೆ ಘೋಷಿಸಲಾದ ಶಿಕ್ಷಣ ಸಂಸ್ಥೆಗಳು:
• ಅಂಗನವಾಡಿ ಕೇಂದ್ರಗಳು
• ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು
• ಪದವಿಪೂರ್ವ (PUC) ಕಾಲೇಜುಗಳು
• ಐಟಿಐ ಹಾಗೂ ಡಿಪ್ಲೊಮಾ ಕಾಲೇಜುಗಳು
ಆದರೆ ಪದವಿ, ಸ್ನಾತಕೋತ್ತರ, ವೃತ್ತಿಪರ ಹಾಗೂ ಇತರೆ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ರಜೆ ಅನ್ವಯಿಸುವುದಿಲ್ಲ ಎಂದು ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.
ಜಿಲ್ಲಾಡಳಿತವು ಸಾರ್ವಜನಿಕರಿಗೆ ನದಿ, ಹೊಳೆ, ತಗ್ಗು ಪ್ರದೇಶಗಳು ಹಾಗೂ ಗುಡ್ಡ ಕುಸಿತ ಸಂಭವಿಸಬಹುದಾದ ಸ್ಥಳಗಳಿಗೆ ತೆರಳದಂತೆ ಎಚ್ಚರಿಕೆ ನೀಡಿದೆ. ಯಾವುದೇ ತುರ್ತು ಪರಿಸ್ಥಿತಿ ಎದುರಾದರೆ ಜಿಲ್ಲಾಡಳಿತದ ಸಹಾಯವಾಣಿ 1077 ಅಥವಾ 0824-2442590 ಸಂಪರ್ಕಿಸುವಂತೆ ಮನವಿ ಮಾಡಲಾಗಿದೆ.
0 ಕಾಮೆಂಟ್‌ಗಳು