HEADLINES

ನಿರಂತರ ಮಳೆ: ಮಂಗಳೂರು ಭಾಗದಲ್ಲಿ ಶಾಲೆಗಳಿಗೆ, ಪುತ್ತೂರು ಭಾಗದಲ್ಲಿ ಪಿಯುಸಿ ಮತ್ತು ಐಟಿಐ - ಡಿಪ್ಲೋಮ ವರೆಗೆ ರಜೆ

ಜಿಲ್ಲೆಯಲ್ಲಿ ಸುರಿಯುತ್ತಿರುವ ನಿರಂತರ ಮಳೆಯ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ತಾಲೂಕುಗಳ ಶಾಲೆ ಹಾಗೂ ಕಾಲೇಜುಗಳಿಗೆ ಆಗಸ್ಟ್ 4ರಂದು ರಜೆ ಘೋಷಿಸಲಾಗಿದೆ.


ಮಂಗಳೂರು, ಉಳ್ಳಾಲ, ಮೂಲ್ಕಿ, ಬಂಟ್ವಾಳ ಮತ್ತು ಮೂಡುಬಿದಿರೆ ತಾಲೂಕುಗಳಲ್ಲಿ 10ನೇ ತರಗತಿವರೆಗಿನ ಶಾಲೆಗಳಿಗೆ ರಜೆ ಅನ್ವಯವಾಗಲಿದೆ.

ಅದೇ ವೇಳೆ ಪುತ್ತೂರು, ಬೆಳ್ತಂಗಡಿ, ಸುಳ್ಯ ಹಾಗೂ ಕಡಬ ತಾಲೂಕುಗಳಲ್ಲಿ 2ನೇ ಪಿಯುಸಿ, ಡಿಪ್ಲೊಮಾ ಮತ್ತು ಐಟಿಐ ಸೇರಿದಂತೆ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ.
ವಿದ್ಯಾರ್ಥಿಗಳು ಹಾಗೂ ಪೋಷಕರು ಸ್ಥಳೀಯ ಆಡಳಿತದಿಂದ ನೀಡಲಾಗುವ ಮುಂದಿನ ಸೂಚನೆಗಳನ್ನು ಪಾಲಿಸುವಂತೆ ತಿಳಿಸಲಾಗಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು